Anil Gunnapur
Author
Anil Gunnapur
ಅನಿಲ್ ಗುನ್ನಾಪೂರ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿಯವರು. ಸದ್ಯ ಬಾಗಲಕೋಟೆಯಲ್ಲಿ ಸರ್ಕಾರಿ ಭೂಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 'ಗುಬ್ಬಚ್ಚಿ ಗೂಡಿನಲ್ಲಿ' ಇವರ ಚೊಚ್ಚಲ ಕವನಸಂಕಲನ. ಈ ಕೃತಿ 2016ರಲ್ಲಿ ಪುಸ್ತಕ ಪ್ರಾಧಿಕಾರದಿಂದ ಪುರಸ್ಕೃತಗೊಂಡಿದೆ. ಪ್ರಜಾವಾಣಿ ಮತ್ತು ಇನ್ನಿತರ ಪತ್ರಿಕೆಗಳಲ್ಲಿ ಇವರ ಕಥೆ- ಕವಿತೆಗಳು ಪ್ರಕಟವಾಗಿವೆ. 2018 ನೇ ಸಾಲಿನ ಪ್ರಜಾವಾಣಿ ದೀಪಾವಳಿ ಕಾವ್ಯ ಸ್ಪರ್ಧೆಯಲ್ಲಿ ಇವರ ಕವಿತೆಗೆ ಮೂರನೇ ಬಹುಮಾನ ಲಭಿಸಿದೆ. 'ಕಲ್ಲು ಹೂವಿನ ನೆರಳು' ಇವರ ಚೊಚ್ಚಲ ಕಥಾಸಂಕಲನ.
ಇವರು ಬರೆದಿರುವ ʻಸರ್ವೆನಂಬರ್ 97ʼ ಎಂಬ ಸಣ್ಣಕಥೆಗಳ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಪುಸ್ತಕ ಬಹುಮಾನ ಲಭಿಸಿದೆ.
ಇವರು ಬರೆದಿರುವ ʻಸರ್ವೆನಂಬರ್ 97ʼ ಎಂಬ ಸಣ್ಣಕಥೆಗಳ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಪುಸ್ತಕ ಬಹುಮಾನ ಲಭಿಸಿದೆ.