ಅನಂತನಾಗ್ ಜನಿಸಿದ್ದು ಸೆಪ್ಟೆಂಬರ್ ೪, ೧೯೪೮ರಲ್ಲಿ. ಅಮ್ಮ ಆನಂದಿ, ತಂದೆ ಸದಾನಂದ ನಾಗರಕಟ್ಟೆ. ಪ್ರಾರಂಭಿಕ ಓದು ದಕ್ಷಿಣ ಕನ್ನಡದ ಆನಂದ ಆಶ್ರಮದಲ್ಲಿ. ಆ ನಂತರದಲ್ಲಿ ಉತ್ತರ ಕನ್ನಡದ ಚಿತ್ರಾಪುರ ಮಠದಲ್ಲಿ ನೆರವೇರಿತು. ಹೆಚ್ಚಿನ ಓದಿಗೆ ಮುಂಬೈನಲ್ಲಿ ನೆಲೆಸಿದ್ದ ಅನಂತ್, ಕನ್ನಡ, ಕೊಂಕಣಿ ಮತ್ತು ಮರಾಠಿ ರಂಗಭೂಮಿಗಳಲ್ಲಿ ಎಂಟು ವರ್ಷಗಳ ಕಾಲ ತೊಡಗಿಸಿಕೊಂಡರು. ಅನಂತನಾಗ್ ಅವರ ಸಹೋದರ ಶಂಕರನಾಗ್ ಮತ್ತು ಪತ್ನಿ ಗಾಯತ್ರಿ ಅನಂತನಾಗ್ ಅವರೂ ಸಹ ಖ್ಯಾತ ಚಿತ್ರ ಕಲಾವಿದರು.