B Janardhana Bhat

B Janardhana Bhat

ಉಡುಪಿ ಜಿಲ್ಲೆಯ ಬೆಳ್ಮಣ್ಣಿನ ಡಾ. ಬಿ. ಜನಾರ್ದನ ಭಟ್ (ಜನನ 1959) ಮೈಸೂರು ವಿಶ್ವವಿದ್ಯಾಲಯದ ಇಂಗ್ಲಿಷ್ ಎಂ. ಎ. ಪದವಿ, ಸಿ.ಐ.ಇ.ಎಫ್.ಎಲ್.ನ ಪಿ.ಜಿ.ಡಿ.ಟಿ.ಇ. ಪದವಿ, ಮೈಸೂರು ಮುಕ್ತ ವಿಶ್ವವಿದ್ಯಾಲಯದ ಕನ್ನಡ ಎಂ.ಎ. ಪದವಿಗಳನ್ನು ಪಡೆದು, ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್. ಡಿ. ಪಡೆದಿದ್ದಾರೆ. ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಮತ್ತು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ‘ಉತ್ತರಾಧಿಕಾರ’ (ವರ್ಧಮಾನ ಪ್ರಶಸ್ತಿ), ‘ಹಸ್ತಾಂತರ’ (ಕನ್ನಡ ಸಾಹಿತ್ಯ ಪರಿಷತ್ತಿನ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ), ಮತ್ತು ‘ಅನಿಕೇತನ’ ಕಾದಂಬರಿ ತ್ರಿವಳಿ, ‘ಮೂರು ಹೆಜ್ಜೆ ಭೂಮಿ’ (ಕ.ಸಾ.ಪ.ದ ಭಾರತೀಸುತ ದತ್ತಿ ಪ್ರಶಸ್ತಿ), ‘ಕಲ್ಲು ಕಂಬವೇರಿದ ಹುಂಬ’ (ತರಂಗ ಮಿನಿ ಕಾದಂಬರಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ), ‘ಬೂಬರಾಜ ಸಾಮ್ರಾಜ್ಯ’ (ಕ.ಸಾ.ಪ.ದ ಗುಬ್ಬಿ ಮುರುಗಾರಾಧ್ಯ ದತ್ತಿ ಪ್ರಶಸ್ತಿ ಮತ್ತು ಮಾಸ್ತಿ ಕಾದಂಬರಿ ಪುರಸ್ಕಾರ), ಮತ್ತು ‘ಗಮ್ಯ’ ಅವರ ಕಾದಂಬರಿಗಳು. ‘ಮತ್ತೆ ನಾವು ಹಿಂದಿನಂತೆ’ ಸಂಕಲನವೂ ಸೇರಿದಂತೆ ಆರು ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ.

ಕತೆ, ಕಾದಂಬರಿ, ಅನುವಾದ, ವಿಮರ್ಶೆ, ಮಕ್ಕಳ ಸಾಹಿತ್ಯ, ಸಂಪಾದಿತ ಗ್ರಂಥಗಳು ಹೀಗೆ ವಿವಿಧ ಪ್ರಕಾರಗಳಲ್ಲಿ ಕೃತಿ ರಚಿಸಿರುವ ಡಾ. ಬಿ. ಜನಾರ್ದನ ಭಟ್ ಅವರ ಪ್ರಕಟಿತ ಕೃತಿಗಳ ಸಂಖ್ಯೆ 96. ವಿಮರ್ಶೆಗಾಗಿ ವಿ.ಎಂ. ಇನಾಂದಾರ್ ವಿಮರ್ಶಾ ಪ್ರಶಸ್ತಿ ಪುರಸ್ಕೃತರು. ಅವರ ಸಮಗ್ರ ಸಾಹಿತ್ಯ ಸಾಧನೆಗಾಗಿ ವಿಶುಕುಮಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ.

 

Books By B Janardhana Bhat