ಭಾರತಿ ಬಿ ವಿ ಅವರು ಜನಿಸಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ. ಬಿ.ಕಾಂ ಪದವೀಧರೆಯಾಗಿರುವ ಇವರಿಗೆ ಕವಿತೆ ರಚನೆ, ಅನುವಾದ, ಪ್ರವಾಸ ಹವ್ಯಾಸಗಳಾಗಿವೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಇವರು ‘ಸಾಸಿವೆ ತಂದವಳು’, ‘ಮಿಸಳ್ ಭಾಜಿ’, ‘ಕಿಚನ್ ಕವಿತೆಗಳು’, ‘ಜಸ್ಟ್ ಮಾತ್ ಮಾತಲ್ಲಿ’, ‘ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯ’, ‘ನಕ್ಷತ್ರಗಳ ಸುಟ್ಟ ನಾಡಿನಲ್ಲಿ’, ‘ಎಲ್ಲಿಂದಲೋ ಬಂದವರು’ ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರ ‘ಸಾಸಿವೆ ತಂದವಳು’ ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘದ ಎಂ.ಕೆ ಇಂದಿರಾ ಪ್ರಶಸ್ತಿ ಹಾಗೂ ‘ಮಿಸಾಳ್ ಬಾಜಿ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಬಂದಿದೆ.