Bannaje Govindaharya

Bannaje Govindaharya

ಬನ್ನಂಜೆ ಗೋವಿಂದಾಚಾರ್ಯರು [೧೯೩೬ – ೧೩ ಡಿಸೆಂಬರ್ ೨೦೨೦] ,ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರು. ಇವರು ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ೧೯೩೬ರಲ್ಲಿ ಜನಿಸಿದರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದಾರೆ. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇವರು ಪ್ರಸಿದ್ಧ ವಾಗ್ಮಿಗಳು, ಆಧ್ಯಾತ್ಮಿಕ ಪ್ರವಚನಕಾರರು ಹಾಗೂ ಚಿಂತಕರೂ ಆಗಿದ್ದರು. ಶ್ರೀಯುತರು ಶಿವಳ್ಳಿಯ ಮಾಧ್ವಬ್ರಾಹ್ಮಣ ಸಂಪ್ರದಾಯಿಗಳು.
ಡಾ.ಬನ್ನಂಜೆ ಗೋವಿಂದಾಚಾರ್ಯ ೧೩/೧೨/೨೦೨೦ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿಯೇ ಕೊನೆಯುಸಿರೆಳೆದರು.

Books By Bannaje Govindaharya