Dr B A Viveka Rai

Dr B A Viveka Rai

ಡಾ. ಬಿ.ಎ.ವಿವೇಕ ರೈ ಸಂಸ್ಕೃತಿ ಚಿಂತಕರು. ಕನ್ನಡ-ತುಳು ಭಾಷೆಯ ಆಂತರಿಕ ಶಕ್ತಿ-ಸಂಪತ್ತನ್ನು ಸಂವರ್ಧಿಸಿದ ವಿದ್ವಾಂಸರು. ಅವರ ಹುಟ್ಟೂರು ಪುತ್ತೂರು ತಾಲೂಕಿನ ‘ಪುಣಚಾ’. (ಜನನ: 1946ರ ಡಿಸೆಂಬರ್ 8ರಂದು), ಹುಟ್ಟೂರಿನಲ್ಲೇ ಪ್ರಾಥಮಿಕ ಶಿಕ್ಷಣ, ಮತ್ತೂರಿನಲ್ಲಿ ಪಿಯುಸಿ, ಬಿಎಸ್ಸಿ ವ್ಯಾಸಂಗ, ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರಕೇಂದ್ರ ದಲ್ಲಿ ಕನ್ನಡ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಜೊತೆಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾ.ಹಾ.ಮಾ.ನಾಯಕರ ಮಾರ್ಗದರ್ಶನದಲ್ಲಿ ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ.
ಕನ್ನಡ ಮತ್ತು ತುಳು ಭಾಷೆಯ ಬಗ್ಗೆ ಅಪಾರ ಒಲವು-ಪಾಂಡಿತ್ಯ ಉಳ್ಳವರು. ಭಾಷಾ ಅಧ್ಯಯನದ ಮಾದರಿಗಳನ್ನು ರೂಪಿಸಿದ ವಿದ್ವಾಂಸರು. ಸಂಶೋಧನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ, ರೀಡರ್, ಪ್ರಾಧ್ಯಾಪಕ, ವಿಭಾಗ ಮುಖ್ಯಸ್ಥರಾಗಿದ್ದರು. ಹಂಪಿಯ ಕನ್ನಡ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿ, ಕೇಂದ್ರ-ರಾಜ್ಯ ಸಾಹಿತ್ಯ ಅಕಾಡೆಮಿ, ಜಾನಪದ ಮತ್ತು ಯಕ್ಷಗಾನ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವವಿದೆ. 12 ಕ್ಕೂ ಹೆಚ್ಚು ಮಹತ್ವದ ಕೃತಿಗಳ ರಚಿಸಿದ್ದು, ತುಳು ಸಾಹಿತ್ಯ ಚರಿತ್ರೆ, ಸಮಗ್ರ ಕನ್ನಡ ಜೈನ ಸಂಪುಟಗಳು ಸೇರಿ ಹಲವು ಕೃತಿಗಳ ಸಂಪಾದನೆ, ಕನ್ನಡ ಸಾಹಿತ್ಯದ ಜರ್ಮನ್ ಅನುವಾದ ಮಾಡಿದ್ದಾರೆ.

Books By Dr B A Viveka Rai