Dr Doddarange Gowda

Dr Doddarange Gowda

ಡಾ|| ದೊಡ್ಡರಂಗೇಗೌಡರು ಕನ್ನಡದ ಕವಿ, ಸಾಹಿತಿ , ಪ್ರಾಧ್ಯಾಪಕರು ಮತ್ತು ಚಲನಚಿತ್ರ ಸಾಹಿತಿಗಳು. ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ೮೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಮನುಜ ಎಂಬ ಕಾವ್ಯನಾಮದಿಂದ ಬರೆಯುತ್ತಿದ್ದಾರೆ. ಚಲನಚಿತ್ರ ಗೀತಸಾಹಿತ್ಯಕ್ಕೆ ಹೆಸರಾಗಿದ್ದಾರೆ. ಗ್ರಾಮೀಣ ಸೊಗಡಿನ ಗೀತ ಸಾಹಿತ್ಯವು ಇವರ ಸಾಹಿತ್ಯದ ಗುರುತಾಗಿದೆ. ಕನ್ನಡ ಪ್ರಗಾಥಗಳ ಸಾಮ್ರಾಟ್ ಎಂದೂ ಪ್ರಸಿದ್ಧಿಯಾಗಿದ್ದಾರೆ.
ಇವರು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕುರುಬರಹಳ್ಳಿಯಲ್ಲಿ 0೭ ಫೆಬ್ರುವರಿ ೧೯೪೬ರಲ್ಲಿ ಜನಿಸಿದರು.ತಂದೆ ಶ್ರೀ ಕೆ. ರಂಗೇಗೌಡರು,ತಾಯಿ ಶ್ರೀಮತಿ ಅಕ್ಕಮ್ಮ. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಮದ್ರಾಸ್ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದರು. ಇವರು ಕನ್ನಡ ನವೋದಯ ಕಾವ್ಯ- ಒಂದು ಪುನರ್ ಮೌಲ್ಯಮಾಪನ ಎಂಬ ವಿಷಯದ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ಪಿಹೆಚ್‍ಡಿ(ಡಾಕ್ಟರೇಟ್) ಪದವಿ ದೊರಕಿತು.
೧೯೭೨ರಿಂದ ೨೦೦೪ರವರೆಗೂ ಬೆಂಗಳೂರಿನ ಕೃಷ್ಣರಾಜೇಂದ್ರ ಮಾರುಕಟ್ಟೆ ಬಳಿ ಇರುವ ಎಸ್.ಎಲ್.ಎನ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ.
೨೦೦೮ ರಿಂದ ೨೦೧೪ ರ ವರೆಗೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದರು.
೨೦೨೧ರ ೮೬ನೇ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

Books By Dr Doddarange Gowda