Dr H S Nagabhusana

Dr H S Nagabhusana

ಡಾ. ಎಚ್.ಎಸ್. ನಾಗಭೂಷಣ ಅವರು ಶಿವಮೊಗ್ಗದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿದ್ದಾರೆ. ’ಎಲ್ಲೆ ಮೀರಿ’ ಪುಸ್ತಕ ಅಲ್ಲದೆ ಅವರು ಸಮಕಾಲೀನ ತಮಿಳು ಲೇಖಕ ಬಾಮಾ ಕುರಿತು ಪುಸ್ತಕ ಪ್ರಕಟಿಸಿದ್ದಾರೆ. ಪದವಿ ವಿದ್ಯಾರ್ಥಿಗಳಿಗಾಗಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿದ್ದಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ರಂಗ ಚಟುವಟಿಕೆಗಳಲ್ಲಿಯೂ ಆಸಕ್ತರಾಗಿರುವ ನಾಗಭೂಷಣ ಅವರು ಹಲವು ಕನ್ನಡ ಮತ್ತು ಇಂಗ್ಲಿಷ್ ನಾಟಕಗಳಲ್ಲಿ ನಟಿಸಿದ್ದಾರೆ ಮತ್ತು ನಿರ್ದೇಶನ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ರಂಗಭೂಮಿಯ ಆಸಕ್ತಿ ಮೂಡಿಸುವುದಕ್ಕಾಗಿ ಹಲವು ನಾಟಕ ನಿರ್ದೇಶನ ಮಾಡಿದ್ದಾರೆ. ಪ್ರತಿಷ್ಠಿತ ಶಿವಮೊಗ್ಗದ ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಟ್ರೆಕ್ಕಿಂಗ್‌ನಲ್ಲಿಯೂ ಆಸಕ್ತರಾಗಿರುವ ನಾಗಭೂಷಣ ಅವರು ನಾಲ್ಕು ಬಾರಿ ಹಿಮಾಲಯದಲ್ಲಿ ಟ್ರೆಕ್ಕಿಂಗ್ ನಡೆಸಿದ್ದಾರೆ.

Books By Dr H S Nagabhusana