ಗಾಯತ್ರಿ ರಾಜ್, ಮೂಲತಃ ದಾವಣಗೆರೆಯವರು, ಒಬ್ಬ ಪ್ರತಿಭಾವಂತ ಲೇಖಕಿ ಮತ್ತು ಕತೆಗಾರ್ತಿ. ವಿಜ್ಞಾನ ವಿದ್ಯಾರ್ಥಿಯಾದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ.
ಅವರ ಕತೆಗಳು ಸುಧಾ, ತರಂಗ, ಕರ್ಮವೀರ ಸೇರಿದಂತೆ ಹಲವು ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿಜಯ ಕರ್ನಾಟಕ, ಪ್ರಜಾವಾಣಿ, ಉದಯವಾಣಿ ಪತ್ರಿಕೆಗಳಲ್ಲಿ ನಿಯಮಿತವಾಗಿ ಅವರ ಲೇಖನಗಳು ಕಾಣಿಸಿಕೊಳ್ಳುತ್ತವೆ.
ಸಂಪದ ಸಾಲು ಎಂಬ ಪತ್ರಿಕೆಯಲ್ಲಿ ಕಳೆದ ಒಂದು ವರ್ಷದಿಂದ “ಹೆಣ್ಣೆ ಬದುಕು ಸುಂದರ ಕಣೆ” ಎಂಬ ಅಂಕಣವನ್ನು ಬರೆಯುತ್ತಿದ್ದಾರೆ. ಇತ್ತೀಚೆಗೆ ಅವರ ಕತೆ ಸಂಕಲನ ‘ಬಣ್ಣದ ಜೋಳಿಗೆ’ ಪ್ರಕಟಗೊಂಡಿದೆ.