K C Raghu

K C Raghu

ಆಹಾರ ತಜ್ಞ, ಅಂಕಣಕಾರ ಕೆ.ಸಿ. ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿತ್ತು.

ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆ ಇದಾಗಿದೆ. ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಆಹಾರಕ್ಕೆ ಸಂಬಂಧಪಟ್ಟ ಕೃತಿಗಳನ್ನು ರಚಿಸಿದ್ದರು. 2023 ಅಕ್ಟೋಬರ್ 15ರ ಭಾನುವಾರದಂದು ಅನಾರೋಗ್ಯದಿಂದ ನಿಧನರಾದರು.

ಕೃತಿಗಳು: ತುತ್ತು ತತ್ವ, ರಸ ತತ್ವ, ಆಹಾರ ರಾಜಕೀಯ

Books By K C Raghu