K Shivarama Karanth

K Shivarama Karanth

ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.

 

ಕಡಲ ತೀರದ ಭಾರ್ಗವ ಎಂದು ಪ್ರಖ್ಯಾತಿಯನ್ನು ಪಡೆದ ಶಿವರಾಮ ಕಾರಂತರು ಉಡುಪಿ ಜಿಲ್ಲೆಯ ಕೋಟ ಎಂಬಲ್ಲಿ ೧೯೦೨ರ ಅಕ್ಟೋಬರ್ ೧೦ರಂದು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಶೇಷ ಕಾರಂತರು ,ತಾಯಿ ಲಕ್ಶ್ಮೀ ಕಾರಂತರು. ೯ ಮಕ್ಕಳ ಕುಟುಂಬದಲ್ಲಿ ಶಿವರಾಮ ಕಾರಂತರು ೪ನೇಯ ಮಗ. ಶಿವರಾಮ ಕಾರಂತರ ಅಣ್ಣ ಮದರಾಸ ಸರಕಾರದಲ್ಲಿ ಸಚಿವರಾಗಿದ್ದರು. ಇನ್ನೊಬ್ಬ ಅಣ್ಣ ವಾಸುದೇವ ಕಾರಂತರು ಲೇಖಕರೂ ,ಆದ್ಯಾತ್ಮ ವಿಷಯಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದಾರೆ.ಶೇಷ ಕಾರಂತರು ಶಾಲಾ ಶಿಕ್ಷಕರಾಗಿದ್ದು ದೊಡ್ದ ಕುಟುಂಬವನ್ನು ಸಾಕಲು ಅಸಾಧ್ಯವಾದಾಗ ಕೆಲಸ ಬಿಟ್ಟು ಜವಳಿ ಅಂಗಡಿ ಆರಂಭಿಸಿದರು.ಇಂಗ್ಲೀಷರನ್ನು ಕಂಡರೆ ಅಸಹ್ಯಪಡುತಿದ್ದ ಕಾಲದಲ್ಲಿ ಶೇಷರು ಅವರ ಮಕ್ಕಳನ್ನು ಇಂಗ್ಲೀಷ್ ಶಾಲೆಗೆ ಕಳುಹಿಸಿದರು. ಕುಂದಾಪುರದ ಶಾಲೆಯಲ್ಲಿ ೧೯೨೦ ರಲ್ಲಿ ಶಿವರಾಮ ಕಾರಂತರು ತಮ್ಮ ಎಸ್.ಎಸ್.ಎಲ್.ಸಿ ಪರೀಕ್ಶೆಯನ್ನು ಬರೆದು ಮುಗಿಸಿದರು. ತಮ್ಮ ಶಾಲೆಯಲ್ಲಿ ರಂಗರಾಯರು ಕಾರಂತರ ಮೊದಲ ಗುರುಗಳಾಗಿ ಕಾರಂತರಿಗೆ ಬೆಂಬಲ ನೀಡಿದರು. ಮುದ್ದಣ ಕವಿಯ ಗುರುವಾಗಿದ್ದ ಮಳಲಿ ಸುಬ್ಬರಾಯರು ಸಹ ಶಿವರಾಮ ಕಾರಂತರಿಗೆ ಗುರುವಾಗಿದ್ದರು. ಮಳಲಿ ಸುಬ್ಬರಾಯರು ಮೂಲತ: ಯಕ್ಷಗಾನ ರಚನೆ ಮಾಡಬಲ್ಲವರಾಗಿದ್ದು ಯಕ್ಷಗಾನದ ಬಗ್ಗೆ ಶಿವರಾಮರಿಗೆ ಆಸಕ್ತಿ ಮೂಡಲು ಮುಖ್ಯ ಕಾರಣರಾದರು.

Books By K Shivarama Karanth