ಎಂ ಕೆ ಇಂದಿರ ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ. ಇವರ ಕಾದಂಬರಿಗಳಲ್ಲಿ ಮಲೆನಾಡಿನ ವರ್ಣನೆ ಸುಂದರವಾಗಿ ಮೂಡಿ ಬಂದಿದೆ. ಎಂ.ಕೆ.ಇಂದಿರಾ ಅವರ ಗೆಜ್ಜೆ ಪೂಜೆ, ಫಣಿಯಮ್ಮ ಮತ್ತು ಪೂರ್ವಾಪರ ಎಂಬ ಕಾದಂಬರಿಗಳು ಚಲನಚಿತ್ರವಾಗಿವೆ. ಫಣಿಯಮ್ಮ ಚಿತ್ರವನ್ನು ನಿರ್ದೇಶಿಸಿದವರು ಶ್ರೀಮತಿ ಪ್ರೇಮಾ ಕಾರಂತ್. ಈ ಚಿತ್ರ ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿತು. ನಟಿ. ಎಲ್. ವಿ.ಶಾರದಾ ಈ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದರು. ಗೆಜ್ಜೆಪೂಜೆ ಕಾದಂಬರಿಯನ್ನು ದಿವಂಗತ ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ್ದರು.
ತೀರ್ಥಹಳ್ಳಿಯಲ್ಲಿ ಜನಿಸಿದರು. ಇವರ ತಂದೆ ‘ತರೀಕೆರೆ ಸೂರ್ಯನಾರಾಯಣರಾವ್’; ತಾಯಿ ‘ಬನಶಂಕರಮ್ಮ. ಅನೇಕ ಸುಪ್ರಸಿದ್ಧ ಕನ್ನಡಿಗರು, ಎಂ. ಕೆ. ಇಂದಿರ ರ, ಸಂಬಂಧಿಗಳು. ಸುಪ್ರಸಿದ್ಧ ಶಿಶುಸಾಹಿತಿ, ಹೊಯಿಸಳ, ಇಂದಿರಾರವರ ಸೋದರಮಾವ. ಪ್ರಜಾವಾಣಿಯ ಖ್ಯಾತ ಸಂಪಾದಕರಾಗಿದ್ದ ಟಿ.ಎಸ್.ರಾಮಚಂದ್ರರಾವ್ (ಟಿಎಸ್ಸಾರ್), ಇವರ ತಮ್ಮ. ಜನಪ್ರಿಯಸಾಹಿತಿ, ಹಾಗೂ ಆಕಾಶವಾಣಿ ನಿರ್ದೇಶಕ, ಡಾ. ಎಚ್.ಕೆ.ರಂಗನಾಥ್, ಇವರ ಚಿಕ್ಕಮ್ಮನ ಮಗ.