N Sandhyarani

N Sandhyarani

ಪತ್ರಕರ್ತೆ, ಲೇಖಕಿ, ಸಿನಿಮಾ ವಿಮರ್ಶಕಿ ಸಂಧ್ಯಾರಾಣಿ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆಯವರು. ಚಿನ್ನದ ಗಣಿ ಕೆ.ಜೆ.ಎಫ್‌ನಲ್ಲಿ ಪದವಿ ಶಿಕ್ಷಣ ಪಡೆದಿರುವ ಇವರು ಪ್ರಸ್ತುತ ಹವ್ಯಾಸಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ.
ಕನ್ನಡದ ಕೆಲವು ಇ-ಪತ್ರಿಕೆಗಳ ಅಂಕಣಕಾರ್ತಿಯಾಗಿರುವ ಇವರು ಬರೆದಿರುವ ಪ್ರಮುಖ ಕೃತಿಗಳೆಂದರೆ ಯಾಕೆ ಕಾಡುತಿದೆ ಸುಮ್ಮನೆ(ಅಂಕಣ ಬರಹಗಳು), ತುಂಬೆ ಹೂ (ಜೀವನ ಚರಿತ್ರೆ), ಪೂರ್ವಿ ಕಲ್ಯಾಣಿ (ನಾಟಕ) ಮುಂತಾದವು. ರಾಷ್ಟ್ರ ಪ್ರಶಸ್ತಿ ವಿಜೇತ ನಾತೀಚರಾಮಿ ಸಿನಿಮಾಕ್ಕೆ ಚಿತ್ರಕತೆ ಬರೆದಿದ್ದರು.

Books By N Sandhyarani