Narendra Modi

Narendra Modi

ನರೇಂದ್ರ ದಾಮೋದರದಾಸ್ ಮೋದಿ (ಸೆಪ್ಟೆಂಬರ್ ೧೭, ೧೯೫೦) ಇವರು ಭಾರತದ ೧೪ನೇ ಪ್ರಧಾನಮಂತ್ರಿಗಳು. ಇವರು ಭಾರತೀಯ ಜನತಾ ಪಕ್ಷದ ಸದಸ್ಯರು. ಇವರು ಅತಿ ಹೆಚ್ಚು ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇವರು ೨೦೧೪ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಎನ್.ಡಿ.ಎ. ಮೈತ್ರಿಕೂಟ) ಪಕ್ಷದಿಂದ ಸ್ಪರ್ಧಿಸಿ ಗೆದ್ದು ಭಾರತದ ೧೪ನೆಯ ಪ್ರಧಾನಮಂತ್ರಿಯಾಗಿದ್ದಾರೆ. ಮೋದಿಯವರು,ಗುಜರಾತ್ ನ ವಡೋದರ, ಹಾಗೂ ವಾರಣಾಸಿ ಎರಡೂ ಕ್ಷೇತ್ರಗಳಲ್ಲಿ ಗೆದ್ದು, ಪ್ರಸಕ್ತ ವಾರಣಾಸಿಯ ಸಂಸದರಾಗಿದ್ದಾರೆ.
ಗುಜರಾತ ರಾಜ್ಯದ ಮೆಹಸಾನಾ ಜಿಲ್ಲೆಯ ವಡನಗರದ ಮೋದಿ ಪರಿವಾರದಲ್ಲಿ ೪ ಮಕ್ಕಳ ಪೈಕಿ ಮೂರನೆಯವರಾಗಿ, ೧೭ ಸೆಪ್ಟೆಂಬರ್ ೧೯೫೦ ರಲ್ಲಿ ಮೋಧ್ ಗಂಛಿ ತೆಲಿ ಜಾತಿಯ ಅತಿ ಬಡ ಕುಟುಂಬದಲ್ಲಿ ಜನಿಸಿದರು. ತಂದೆ ದಾಮೋದರ ದಾಸ್ ಮುಲಚಂದ್ ಮೋದಿ ಮತ್ತು ತಾಯಿ ಹೀರಾ ಬೆನ್. ವಾದ್ ನಗರ ರೈಲ್ವೆ ನಿಲ್ದಾಣದಲ್ಲಿ ಒಂದು ಚಹಾದ ಅಂಗಡಿಯನ್ನು ನಡೆಸುತ್ತಿದ್ದ ಸಮಯದಲ್ಲಿ ಮೋದಿಯವರು, ತಂದೆಗೆ ಸಹಾಯ ಮಾಡುತ್ತಿದ್ದರು. ಅರವತ್ತರ ದಶಕದ ಮಧ್ಯದಲ್ಲಿ ಇಂಡೋ-ಪಾಕ್ ಯುದ್ಧ ನಡೆದಾಗ ಬಾಲಕ ಮೋದಿ, ರೈಲು ನಿಲ್ದಾಣಗಳಲ್ಲಿ ಸೈನಿಕರಿಗೆ ಸ್ವಯಂಪ್ರೇರಣೆಯಿಂದ ಸೇವೆ ಮಾಡಿದ್ದರು. ೧೯೬೭ರಲ್ಲಿ ಪ್ರವಾಹ ಪೀಡಿತ ಗುಜರಾತ್ ಜನತೆಯ ಸೇವೆ ಮಾಡಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ನಾಯಕರಾಗಿ ಆಯ್ಕೆಯಾಗಿದ್ದರು. ಗುಜರಾತಿನಲ್ಲಿ ಅನೇಕ ಸಾಮಾಜಿಕ-ರಾಜಕೀಯ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

Books By Narendra Modi