Nemichandra

Nemichandra

ನೇಮಿಚಂದ್ರ (ಜನನ:ಜುಲೈ ೧೬, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.
ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗದಲ್ಲಿ ಜುಲೈ ೧೬, ೧೯೫೯ರಂದು ಜನಿಸಿದರು. ತಂದೆ ಪ್ರೊ. ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್‌ನಿಂದ ಬಿ.ಇ. ಪದವಿ. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಿಂದ ಎಂ.ಎಸ್. ಪದವಿ. ಬೆಂಗಳೂರಿನ ಎಚ್.ಎ.ಎಲ್ ಸಂಸ್ಥೆಯಲ್ಲಿ ಉನ್ನತ ತಂತ್ರಜ್ಞ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕನ್ನಡದಲ್ಲಿ ಚಿಂತನಪೂರ್ಣ ಲೇಖನ, ಪುಸ್ತಕಗಳನ್ನು ಬರೆಯುತ್ತಿದ್ದಾರೆ.
ನೇಮಿಚಂದ್ರ ಅವರು ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ತಮ್ಮ ವೈಶಿಷ್ಟ್ಯಪೂರ್ಣ ಬರಹಗಳನ್ನು ನೀಡುತ್ತಾ ಬಂದಿದ್ದಾರೆ. ‘ನೇಮಿಚಂದ್ರರ ಕಥೆಗಳು’ ಒಂದು ದೊಡ್ಡ ಸಂಕಲನವಾಗಿ ಹೊರಬಂದಿದೆ. ಹಿಂದೆ ಬಿಡಿ ಸಂಕಲನಗಳಾಗಿ ‘ನಮ್ಮ ಕನಸುಗಳಲ್ಲಿ ನೀವಿದ್ದೀರಿ’, ‘ಮತ್ತೆ ಬರೆದ ಕಥೆಗಳು’, ‘ಕಳೆಯ ಬೇಕಿದೆ ನಿನ್ನ ಜೊತೆಯಲಿ ಒಂದು ಶ್ಯಾಮಲ ಸಂಜೆ’ ಇತ್ಯಾದಿ ರೂಪಗಳಲ್ಲಿ ಬಂದ ಈ ಸಂಕಲನದಲ್ಲಿನ ಕಥೆಗಳು ಓದುಗರನ್ನು ಅಪಾರವಾಗಿ ಸೆಳೆದಿವೆ.

Books By Nemichandra