ಪತ್ರಕರ್ತ, ಬರಹಗಾರ ಪದ್ಮನಾಭ ಭಟ್ ಅವರು ಜನಿಸಿದ್ದು 1990 ಜೂನ್ 27ರಂದು. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶೇವ್ಕಾರ ಗ್ರಾಮದಲ್ಲಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಜಾವಾಣಿಯಲ್ಲಿ ವರದಿಗಾರ ಹಾಗೂ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಪ್ರಸ್ತುತ ಸುಧಾ ವಾರಪತ್ರಿಕೆಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸಿನಿಮಾ, ರಂಗಭೂಮಿ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಇರುವ ಇವರ ಚೊಚ್ಚಲ ಕೃತಿ ಕೇಪಿನ ಡಬ್ಬಿ. ಈ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ, ಛಂದ ಪುಸ್ತಕ ಬಹುಮಾನ, ಮಾಸ್ತಿ ಕಥಾ ಪುರಸ್ಕಾರ, ಟೋಟೊ ಪುರಸ್ಕಾರ ಹಾಗೂ ಇತರ ಪ್ರಶಸ್ತಿಗಳು ಸಂದಿವೆ.
ಛಂದ ಪುಸ್ತಕ ಬಹುಮಾನ ಪಡೆದ ಕಥಾಸಂಕಲನ. ಈ ಕಥಾಸಂಕಲನ ನಾಡಿನ ಹಲವಾರು ಪ್ರಮುಖ ಪ್ರಶಸ್ತಿಗಳನ್ನು ಗಳಸಿದ್ದಲ್ಲದೆ, ಕೇಂದ್ರ ಸಾಹಿತ್ಯ ಅಕಾದೆಮಿಯ ಯುವ ಪುರಸ್ಕಾರವನ್ನೂ ಪಡೆದುಕೊಂಡಿದೆ. ಕನ್ನಡದಲ್ಲಿ ವಿಶೇಷವಾಗಿ ಓದುಗರು ಚರ್ಚೆ ಮಾಡಿದ ಕೃತಿ ಇದಾಗಿದೆ. ಉತ್ತರ ಕನ್ನಡದ ಅಂಕೋಲೆಯ ಗಂಗಾವಳಿ ನದಿ ಸೆರಗಿನಲ್ಲಿನ ಶೇವ್ಕಾರ ಎಂಬ ಪುಟ್ಟ ಊರು. ಹುಟ್ಟಿದ್ದು 1990ರಲ್ಲಿ. ಪಿಯುಸಿವರೆಗೆ ಊರಲ್ಲಿಯೇ ಓದು. ನಂತರ ಹುಬ್ಬಳ್ಳಿಯಲ್ಲಿ ಬಿ.ಎ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಎಂ.ಎ; 2013 ನವೆಂಬರ್ನಿಂದ ‘ಪ್ರಜಾವಾಣಿ’ ದಿನಪತ್ರಿಕೆಯಲ್ಲಿ ವೃತ್ತಿಬದುಕು ಆರಂಭ. ಓದು-ಬರಹ ಬರೀ ಹವ್ಯಾಸವಷ್ಟೇ ಅಲ್ಲವೇ ಅಲ್ಲ. ಅದನ್ನು ಹೊರತುಪಡಿಸಿ ಸಿನಿಮಾ, ರಂಗಭೂಮಿ, ಪರ್ಯಟನೆಗಳಲ್ಲಿಯೂ ಆಸಕ್ತ. ಇವರ ಮೊದಲ ಕಥಾಸಂಕಲನ ‘ಕೇಪಿನ ಡಬ್ಬಿ’ಗೆ ಕೇಂದ್ರ ಸಾಹಿತ್ಯ ಅಕಾದೆಮಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಬಹುಮಾನ, ಛಂದ ಪುಸ್ತಕ ಬಹುಮಾನ, ಮಾಸ್ತಿ ಕಥಾ ಪುರಸ್ಕಾರ, ಶಾ. ಬಾಲೂರಾವ್ ಯುವ ಬರಹಗಾರ ಪ್ರಶಸ್ತಿ ಹಾಗೂ ಟೋಟೋ ಪುರಸ್ಕಾರಗಳು ಲಭಿಸಿವೆ. ಕನ್ನಡಿಹರಳು ಅವರ ಎರಡನೆಯ ಕಥಾಸಂಕಲನ.