Parvathi Patagi

Parvathi Patagi

ಬೆಳಗಾವಿ ತಾಲ್ಲೂಕು ಸುಳೇಭಾವಿಯಯವರಾದ ಪಾರ್ವತಿ ಅವರು ಗ್ರಾಮ ಪಂಚಾಯಿತಿ ಆಡಳಿತ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರಿನ ಶಾಂಗ್ರೀ- ಲಾ ಅಕಾಡೆಮಿ ನಿರ್ದೇಶಕಿಯಾಗಿ ಸಾಮಾಜಿಕ ಮತ್ತು ಸಾಹಿತ್ಯಕ ಚಟುವಟಿಕೆಯಲ್ಲಿ ತೊಡಗಿದ್ದಾರೆ. ನೇಕಾರರ ಬದುಕು ಬವಣೆಯನ್ನು ‘ಮಿಲನ’ ಕಾದಂಬರಿಯಲ್ಲಿ ನೈಜವಾಗಿ, ಕಲಾತ್ಮಕವಾಗಿ ಕಟ್ಟಿಕೊಟ್ಟ ಪಾರ್ವತಿ ಪಿಟಗಿ ಐದು ಕಾದಂಬರಿ, ಒಂದು ಕಥಾ ಸಂಕಲನ, ಲೇಖನ ಸಂಕಲನ ಪ್ರಕಟಿಸಿದ್ದಾರೆ.  ಅವರ ಹಲವು ಕಥೆ, ಕಾದಂಬರಿ, ಲೇಖನಗಳು  ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

`ಮಿಲನ’ ಕಾದಂಬರಿಗೆ ದೇವರ ದಾಸಿಮಯ್ಯ ಸಾಹಿತ್ಯ ಶ್ರೀ ಪ್ರಶಸ್ತಿ ಸಂದಿದೆ. ಅವರ ಬಹುತೇಕ ಕಥೆ, ಕಾದಂಬರಿಗೆ ಪ್ರಶಸ್ತಿಗಳು ಸಂದಿವೆ. ಬೆಳಗಾವಿ ಜಿಲ್ಲೆಯ ಆಡುಭಾಷೆಯಲ್ಲಿ ಕಲಾತ್ಮಕವಾಗಿ ಕಟ್ಟಿಕೊಡುವ ಕಥೆಗಳಿಂದಾಗಿ ಪಾರ್ವತಿ ಅವರನ್ನು ಭರವಸೆ ಮೂಡಿಸಿರುವ ಕಥೆಗಾರ್ತಿ ಎಂದು ಗುರುತಿಸಲಾಗುತ್ತಿದೆ.

Books By Parvathi Patagi