Poornima Malagimani

Poornima Malagimani

ಲೇಖಕಿ ಪೂರ್ಣಿಮಾ ಮಾಳಗಿಮನಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹನುಮಂತಪುರದವರು. ಮಂಡ್ಯ ಜಿಲ್ಲೆಯ ನವೋದಯ ವಿದ್ಯಾಲಯದಲ್ಲಿ ಪ್ರೌಢಶಿಕ್ಷಣ ಪೂರೈಸಿ, ಚಿತ್ರದುರ್ಗದ ಎಸ್.ಜೆ.ಎಂ.ಐ.ಟಿ. ಎಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಪದವೀಧರೆ.  ‘ಎನಿ ವನ್ ಬಟ್ ದಿ ಸ್ಪೌಸ್’ ಎನ್ನುವ ಇಂಗ್ಲೀಷ್ ಕಿರುಗತೆಗಳ (2017) ಸಂಕಲನ ಪ್ರಕಟಿಸಿದ್ದು, ನಾಡಿನ ವಿವಿಧ ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇವರ ಹಲವಾರು ತಾಂತ್ರಿಕ ಹಾಗೂ ಸಾಹಿತ್ಯಕ  ವಿಷಯ ಕುರಿತ ಲೇಖನಗಳು ಪ್ರಕಟವಾಗಿವೆ. ಪ್ರತಿಷ್ಠಿತ ಭಾರತೀಯ ವಾಯುಸೇನೆಯಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಅಧಿಕಾರಿಯಾಗಿ ಆರು ವರ್ಷ ಸೇವೆ ಸಲ್ಲಿಸಿ, ಪ್ರಸ್ತುತ ಜಂಟಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕೃತಿಗಳು: Anyone but the Spouse- ಇಂಗ್ಲಿಷಿನಲ್ಲಿ ಬರೆದ ಸಣ್ಣ ಕಥೆಗಳ ಸಂಕಲನ, ಇಜಯಾ (ಕಾದಂಬರಿ),ಪ್ರೀತಿ ಪ್ರೇಮ: ಪುಸ್ತಕದಾಚೆಯ ಬದನೆಕಾಯಿ, ಆಗಮ್ಯ, ಡೂಡಲ್ ಕತೆಗಳು, ಲವ್ ಟುಡೆ, ಮ್ಯಾಜಿಕ್ ಸೌಟು

Books By Poornima Malagimani