Prakash Rai

Prakash Rai

ಪ್ರಕಾಶ್ ರೈ ( ಮಾರ್ಚ್ ೨೬, ೧೯೬೫) ಭಾರತೀಯ ಚಿತ್ರರಂಗದ ಪ್ರಸಿದ್ಧ ನಟರಾಗಿದ್ದಾರೆ. ಪ್ರಕಾಶ್ ರೈ ಎಂಬ ಮೂಲ ಹೆಸರಿನಿಂದ ತಮ್ಮ ಕನ್ನಡ ನಾಡಿನಲ್ಲಿ ಪ್ರಖ್ಯಾತರಾಗಿರುವ ಅವರು ಇತರ ಚಿತ್ರರಂಗಗಳಲ್ಲಿ ಪ್ರಕಾಶ್ ರಾಜ್ ಎಂದು ಪ್ರಖ್ಯಾತರು.
ಪ್ರಕಾಶ್ ರೈ ಅವರಿಗೆ ಹೆಚ್ಚು ಪಾತ್ರಗಳು ದೊರೆತದ್ದು ವಾಣಿಜ್ಯ ಉದ್ಧೇಶದ ಚಿತ್ರಗಳಾದರೂ ಪ್ರಸಿದ್ಧಿ ನಿರ್ದೇಶಕರುಗಳಾದ ಕೆ. ಬಾಲಚಂದರ್, ಮಣಿರತ್ನಂ, ಪ್ರಿಯದರ್ಶನ್, ನಾಗಾಭರಣ ಅಂತಹವರಿಗೆ ಆತನ ಸಾಮರ್ಥ್ಯ ಕೂಡಾ ಗೊತ್ತಿತ್ತು. ಪ್ರಕಾಶ್ ರೈ 1998ರ ವರ್ಷದಲ್ಲಿ ಇರುವರ್ ಚಿತ್ರದಲ್ಲಿನ ಪೋಷಕ ಪಾತ್ರದ ಅಭಿನಯಕ್ಕೆ ರಾಷ್ಟ್ರಪ್ರಶಸ್ತಿ ಪಡೆದರು. 1999, 2002, 2003ರ ವರ್ಷಗಳಲ್ಲಿ ಆತನ ಅಭಿನಯ ರಾಷ್ಟ್ರಪ್ರಶಸ್ತಿ ಆಯ್ಕೆ ಮಂಡಳಿಯ ವಿಶೇಷ ಜ್ಯೂರಿಗಳ ಮೆಚ್ಚುಗೆ ಪಡೆಯಿತು. 2003ರ ವರ್ಷದಲ್ಲಿ ವಿಶೇಷ ಜ್ಯೂರಿ ಮೆಚ್ಚುಗೆಯ ಬಹುಮಾನ ನೀಡುವಾಗ ಆ ವರ್ಷದ ತಮಿಳು, ಕನ್ನಡ ಮತ್ತು ತೆಲುಗಿನ ಒಟ್ಟು ಹನ್ನೆರಡು ಚಿತ್ರಗಳಲ್ಲಿ ಪ್ರಶಂಸನೀಯ ಅಭಿನಯ ನೀಡಿದ್ದಾರೆ ಎಂದು ಕೊಂಡಾಡಿತು. ಇದು ಈ ನಟ ಎಷ್ಟು ಸಮರ್ಥ ಎಂಬುದಕ್ಕೆ ಒಂದು ನಿದರ್ಶನ. ರಾಷ್ಟ್ರಪ್ರಶಸ್ತಿಗಳಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಅಂದರೆ ಅವರು ರಾಷ್ಟ್ರಪ್ರಶಸ್ತಿ ಪಡೆಯುವಲ್ಲಿ ಸ್ವಲ್ಪದರಲ್ಲಿ ವಂಚಿತರಾಗಿದ್ದಾರೆ ಎಂದು ಕೂಡಾ ಅರ್ಥವಿದೆ. ಹೀಗೆ ಹಲವು ಬಾರಿ ರಾಷ್ಟ್ರಪ್ರಶಸ್ತಿ ಪ್ರಕಾಶ್ ರೈ ಬಾಗಿಲ ಹೊಸ್ತಿಲವರೆಗೂ ಬಂದು ಕೈಗೆ ಸಿಗದಂತೆ ತಪ್ಪಿಸಿಕೊಳ್ಳುತ್ತಿತ್ತು. 2008 ರ ವರ್ಷದಲ್ಲಿ ಕಾಂಚೀವರಂ ಚಿತ್ರದಲ್ಲಿನ ಅಭಿನಯಕ್ಕಾಗಿ ಪ್ರಕಾಶ್ ರೈ ಅವರಿಗೆ ಕಡೆಗೂ ಶ್ರೇಷ್ಠ ನಟ ಪ್ರಶಸ್ತಿ ಸಂದಿತು. ತಮಿಳು, ತೆಲುಗಿನ ಚಿತ್ರಗಳಲ್ಲಿ ಪ್ರಕಾಶ್ ರೈ ಅವರಿಗೆ ಸಂದಿರುವ ರಾಜ್ಯ ಮತ್ತು ಫಿಲಂ ಫೇರ್ ಅಂತಹ ಪ್ರಶಸ್ತಿಗಳು ಹಲವಾರು.
ಅವರು ನಟಿಸಿದ ‘ನಾಗಮಂಡಲ’ದಲ್ಲಿನ ಅವರ ಅಭಿನಯ ಜನರ ಮನಸ್ಸಿನಲ್ಲಿ ಚಿರಸ್ಮರಣೀಯ. ಇತ್ತೀಚಿನ ವರ್ಷದಲ್ಲಿ ತಾವೇ ತಮ್ಮದೇ ಚಿಂತನೆಯಾದ ತಮಿಳು ಚಿತ್ರದ ಅವತರಣಿಕೆಯ ಕನ್ನಡ ಚಿತ್ರವೊಂದನ್ನು ಗೆಳೆಯ ಸುರೇಶ್ ಜೊತೆಗೂಡಿ ‘ನಾನು ನನ್ನ ಕನಸು’ ಎಂಬ ಚಿತ್ರವಾಗಿಸಿ, ಸ್ವತಃ ನಿರ್ದೇಶಿಸಿ ಉತ್ತಮ ಯಶಸ್ಸು ಕೂಡಾ ಕಂಡರು. ಇನ್ನೂ ಕೆಲವು ಚಿತ್ರಗಳನ್ನು ಅವರು ನಿರ್ಮಿಸುತ್ತಿದ್ದಾರೆ.

Books By Prakash Rai