Shridhara D.S

Shridhara D.S

.ಡಿ.ಎಸ್. ಶ್ರೀಧರ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ನಿಟ್ಟೂರು ಸಮೀಪದ ಧರೆಮನೆ ಗ್ರಾಮದವರು. ತಂದೆ ಶ್ರೀಪಾದಯ್ಯ (ಯಕ್ಷಗಾನ ಕಲಾವಿದರು) ತಾಯಿ ಸರಸ್ವತಿ. ತಂದೆ ಶ್ರೀಪಾದಯ್ಯ ಕೃಷಿಕರಾಗಿಯೂ ಯಕ್ಷಗಾನ ಕಲಾವಿದರೂ ಆಗಿದ್ದರು.
ಹೆಬ್ಬಿಗೆ ಸರಕಾರೀ ಶಾಲೆಯಲ್ಲಿ 7ನೇ ತರಗತಿ, ನಂತರ ಉಡುಪಿಯಲ್ಲಿ ಹೈಸ್ಕೂಲ್ ಹಾಗೂ ಪಿ. ಯು. ಸಿ., ಪದವಿ ವ್ಯಾಸಂಗ ಪೂರ್ಣಗೊಳಿಸಿದರು. ಉಡುಪಿ ರಾಘವೇಂದ್ರ ಪುಸ್ತಕ ಭಂಡಾರದಲ್ಲಿ ಉದ್ಯೋಗಿಯಾಗಿದ್ದು, ಅಂಚೆ ತೆರಪಿನ ಶಿಕ್ಷಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದರು. ಕೆಮ್ಮಣ್ಣು ಮತ್ತು ಕೋಟ ವಿದ್ಯಾಸಂಸ್ಥೆಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ನಂತರ 1991ರಲ್ಲಿ ಕಿನ್ನಿಗೋಳಿ ಪೊಂಪೈ ಕಾಲೇಜಿಗೆ ಪೂರ್ಣಕಾಲಿಕ ಉಪನ್ಯಾಸಕರಾಗಿ ಅಲ್ಲಿಯೇ ನಿವೃತ್ತರಾದರು.
ಇವರ ‘ಯಕ್ಷಗಾನ ಪ್ರಸಂಗ ಮಾಲಿಕಾ’ ಕೃತಿಗೆ 2011ನೇ ಸಾಲಿನ ಯಕ್ಷಗಾನ ಬಯಲಾಟ ಅಕಾಡಮಿಯಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿ ಲಭಿಸಿದೆ. ಶಿವಮೊಗ್ಗದಲ್ಲಿ 2016ರಲ್ಲಿ ನಡೆದ ಅಖಿಲ ಭಾರತ ಯಕ್ಷಗಾನ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು. ಸುಮಾರು 475ಕ್ಕೂ ಮಿಕ್ಕಿ. ಯಕ್ಷಗಾನ ಕವಿಗಳ ಬಗ್ಗೆ, 25. ನಾಟಕಗಳ ಬಗ್ಗೆ ಬರೆದ ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಸದ್ಯ, ಕಿನ್ನಿಗೋಳಿಯಲ್ಲಿ ನೆಲೆಸಿದ್ದು, ಇವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಯಿಂದ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ ಲಭಿಸಿದೆ.

Books By Shridhara D.S