ವಸುಧೇಂದ್ರ ಕನ್ನಡ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ೧೯೬೯ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಾಡಿದ್ದಾರೆ.ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸಸ್ಟಿಟ್ಯೂಟ್ ಆಫ್ ಸೈನ್ಸ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ೨೦ ವರ್ಷಗಳ ಕಾಲ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಬೆಂಗಳೂರುಲ್ಲಿ ವಾಸವಾಗಿದ್ದು ಸದ್ಯಕ್ಕೆ ಖಾಸಗಿಯಾಗಿ ಹಲವಾರು ಕೆಲಸ ಮತ್ತು ಬರಹಗಳಲ್ಲಿ ತೊಡಗಿಕೊಂಡಿದ್ದಾರೆ.